

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮ.ಬೆಟ್ಟದ ಪುದೂರು ಗ್ರಾಮದ ಮಣಿಕಂಠ (45)ಬಂಧಿತ. ಈತ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿದ್ದ ಮದ್ಯ ಪತ್ತೆಯಾಗಿದೆ. ಬಳಿಕ 90 ಮಿ/ಲೀನ 76 ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಿಬ್ಬಂದಿ ಜಯರಾಮು, ಸಿದ್ದರಾಮು, ರವಿಕುಮಾರ್ ಹಾಗೂ ರಮೇಶ್ ಭಾಗವಹಿಸಿದ್ದರು.