ಮದ್ಯ ಮಾರಾಟ ನಿಷೇಧ

Liquor-Banned-11-4-16
Published on

ಕಲಬುರಗಿ: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಸೆ.೨೩ರ ಬೆಳಗ್ಗೆಯಿಂದ ೨೪ ಬೆಳಗ್ಗೆ ೧೦ ಗಂಟೆಯವರೆಗೂ ಕಲಬುರಗಿ ನಗರ ಹಾಗೂ ಜಿಲ್ಲಾಧ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ಜಿಲ್ಲೆಯಾಧ್ಯಂತ ಮದ್ಯಪಾನ, ಸರಾಯಿ, ಸೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯ ಹಾಗೂ ಎಲ್ಲ ತರಹದ ಮಾದಕ ವಸ್ತುಗಳ ಮಾರಾಟ ನಿಷೇಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net