ಮದ್ಯವರ್ಜನ ಉಚಿತ ಶಿಬಿರಕ್ಕೆ ಚಾಲನೆ

14-JULY-GPT-6
Published on

ಗುಂಡ್ಲುಪೇಟೆ: ಸುತ್ತೂರು ಮಹಾಸಂಸ್ಥಾನ ಮಠ ಮತ್ತು ಹಾಲಹಳ್ಳಿ ಸಂಗಮ ಪ್ರತಿಷ್ಠಾನ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದ ಜೆಎಸ್‌ಎಸ್ ಅನುಭವ ಮಂಟಪದಲ್ಲಿ 21ನೇ ಮದ್ಯವರ್ಜನ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರವನ್ನು ತಹಸೀಲ್ದಾರ್ ಟಿ.ರಮೇಶ್ ಬಾಬು ಉದ್ಘಾಟಿಸಿದರು. ಚುಂಚನಹಳ್ಳಿ ಮತ್ತು ನವಿಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಚನ್ನಬಸವ ಸ್ವಾಮೀಜಿ, ಚಿಕ್ಕತುಪ್ಪೂರು ಮಠದ ಪೀಠಾಧ್ಯಕ್ಷರಾದ ಶ್ರೀ ಚನ್ನವೀರ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕಮರಹಳ್ಳಿ ರವಿ, ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮಾಜಿ ಉಪಾಧ್ಯಕ್ಷ ಮಹದೇವಪ್ಪ, ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಬಸವಣ್ಣ, ಕಾಲೇಜಿನ ಪ್ರಾಂಶುಪಾಲೆ ಡಾ.ಮಹದೇವಮ್ಮ, ರೇವಣ್ಣಸ್ವಾಮಿ, ಸೋಮಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net