ಮಧ್ಯಸ್ಥಿಕೆದಾರರಿಗೆ ೨ ದಿನಗಳ ಪುನಶ್ಚೇತನ ತರಬೇತಿ ಕಾರ್ಯಾಗಾರ

bkt-22-4
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಮಧ್ಯಸ್ಥಿಕೆದಾರರಿಗೆ ಹಮ್ಮಿಕೊಂಡ ೨ ದಿನಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಕೀಲರು.
Published on

ಬಾಗಲಕೋಟೆ: ರಾಜ್ಯ ಕಾನೂನು ಸೇವೆಗಳ ಪ್ರಾಽಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಮಧ್ಯಸ್ಥಿಕೆದಾರರಿಗೆ ಹಮ್ಮಿಕೊಂಡ ೨ ದಿನಗಳ ಪುನಶ್ಚೇತನ ಕಾರ್ಯಕ್ರಮ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಜರುಗಿತು.

ಎರಡು ದಿನಗಳ ಕಾಲ ಹಮ್ಮಿಕೊಂಡ ಪುನಶ್ಚೇತನ ತರಬೇತಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ಎನ್.ವಿ.ವಿಜಯ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳನ್ನು ಬೇಗನೆ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ ಹಮ್ಮಿಕೊಳ್ಳಲಾಗಿದೆ. ಈ ತಗರಬೇತಿಯ ಸದುಪಯೋಗವನ್ನು ಮಧ್ಯಸ್ಥಿಕೆದಾರರ ವಕೀಲರು ಪಡೆದುಕೊಂಡು ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಲು ಮಧ್ಯಸ್ಥಿಕೆದಾರರ ಪಾತ್ರ ಮುಖ್ಯವಾಗಿದ್ದು, ಈ ಮಧ್ಯಸ್ಥಿಕೆದಾರರಿಗೆ ತರಬೇತಿ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರ ಸದುಪಯೋಗವನ್ನು ಮಧ್ಯಸ್ಥಿಕೆದಾರ ವಕೀಲರು ಪಡೆದುಕೊಳ್ಳಬೇಕು. ವಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವುದಕ್ಕೆ ಮಧ್ಯಸ್ಥಿಕೆಯು ಕಡಿಮೆ ವೆಚ್ಚದ ಹಾಗೂ ಪರಿಣಾಮಕಾರಿಯಾದ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net