

ಮಂಗಳೂರು: ಕರೊನಾ ಹಿನ್ನೆಲೆಯಲ್ಲಿ ಮನಪಾ ವ್ಯಾಪ್ತಿಯಲ್ಲಿ ಸರ್ಕಾರದ ಸೂಚನೆ ಪ್ರಕಾರ ಶನಿವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ _ 5 ಗಂಟೆ ತನಕ ಕರ್ಪ್ಯೂ ಪರಿಣಾಮಕಾರಿ ಅನುಷ್ಠಾನ ಮಾಡಲಾಗುವುದು.
ನಗರ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪ್ತೀ ಚೆಕ್ ಪೋಸ್ಟ್ ನಲ್ಲಿ 7-8 ಮಂದಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಕೆಎಸ್ ಆರ್ ಪಿ ಹಾಗೂ ಸಿಎಆರ್ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.