ಮನಸೆಳೆದ ಮಕ್ಕಳ ಸಂತೆ

27ss1makkala sante
Published on

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಕಲ್ಮಠದ ಎಸ್.ಕೆ.ಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶನಿವಾರ ಮಕ್ಕಳ ಸಂತೆ ಆಯೋಜಿಸಲಾಗಿತ್ತು. ವಿದ್ಯಾಸಂಸ್ಥೆ ಅಧ್ಯಕ್ಷ ಕಲ್ಲು ಮಠದ ಪೀಠಾಧ್ಯಕ್ಷ ಮಹಾಂತ ಸ್ವಾಮೀಜಿ, ವಿದ್ಯಾಸಂಸ್ಥೆ ಕಾರ್ಯದರ್ಶಿ ನಂಜುಂಡಸ್ವಾಮಿ ಮಕ್ಕಳ ಸಂತೆಗೆ ಚಾಲನೆ ನೀಡಿದರು.

ಕಾರ್ಯ ದರ್ಶಿ ನಂಜುಂಡಸ್ವಾಮಿ ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಸಂತೆಯನ್ನು ನಡೆಸು ವುದರಿಂದ ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹೆಚ್ಚಾಗುತ್ತದೆ. ಭವಿಷ್ಯದಲ್ಲಿ ವ್ಯಾಪಾರ ವ್ಯವಹಾರ ನಡೆಸುವ ಸಂದರ್ಭ ಪೂರಕ ವೇದಿಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳು ವ್ಯವಹಾರ ಜ್ಞಾನ ಅರಿಯಲು ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ತರಕಾರಿ, ಸೊಪ್ಪು, ಗೆಡ್ಡೆ-ಗೆಣಸು, ಹಣ್ಣುಗಳನ್ನು ತಂದು ಮಾರಾಟ ಮಾಡಿದರು. ಪಾಲಕರು ಸಂತೆಯಲ್ಲಿ ವಸ್ತುಗಳನ್ನು ಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net