

ಬಸವಕಲ್ಯಾಣ: ನೆಮ್ಮದಿಯ ಬದುಕಿಗೆ ಸಂಗೀತ ಸಹಕಾರಿಯಾಗಿದ್ದು, ಮನಸ್ಸನ್ನು ಅರಳಿಸುವ ಶಕ್ತಿ ಸಂಗೀತಕ್ಕಿದೆ ಎಂದು ಗವಿಮಠ ಸಂಸ್ಥಾನದ ಶ್ರೀ ಡಾ.ಅಭಿನವ ಘನಲಿಂಗ ರುದ್ರಮನಿ ಶಿವಾಚಾರ್ಯರು ನುಡಿದರು.
ನಗರದ ತ್ರಿಪುರಾಂತದ ಗವಿಮಠ ಸಂಸ್ಥಾನದಲ್ಲಿ ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾ ವೃಂದ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ಸಾಮಾನ್ಯಯೋಜನೆಯ ಧನ ಸಹಾಯ ಅಡಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಗೀತ ಸೌರಭ ಸಾಂಸ್ಕೃತಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಂಗೀತ ಕೇಳಿ ಆನಂದಿಸುವ ಜತೆಗೆ ಸಂಗೀತ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದರು.
ಉದ್ಘಾಟನೆ ನೆರವೇರಿಸಿದ ಕಾರ್ಯದರ್ಶಿ ರಾಷ್ಟ್ರೀಯ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಮಾತನಾಡಿ, ಜಾನಪದ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಕೆಲಸ ನಡೆಯಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬೀದರ್‌ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದರಾಮ ಶಿಂಧೆ, ನಿವೃತ್ತ ನ್ಯಾಯಾಧೀಶ ಸುಭಾಷಚಂದ್ರ ನಾಗರಾಳೆ, ಕರ್ನಾಟಕ ನೀರಾವರಿ ನಿಗಮದ ನಿವೃತ್ತ ಎಂಡಿ ಮಲ್ಲಿಕಾರ್ಜುನ ಗುಂಗೆ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಂಭುಲಿಂಗ ಕಾಮಣ್ಣ ಮಾತನಾಡಿದರು.
ಕಿಟ್ಟಾದ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ಮುಖ್ಯಗುರು ಸುಧಾಕರ ಮಹೇಂದ್ರಕರ, ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾ ವೃಂದ ಸಂಘ ಅಧ್ಯಕ್ಷ ದಿಲೀಪಕುಮಾರ ದೇಸಾಯಿ ಇದ್ದರು.
ಸಂಘ ಪ್ರಧಾನ ಕಾರ್ಯದರ್ಶಿ ವೀರಶೆಟ್ಟಿ ಮಲಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಶಾಮಸುಂದರ ಗುಂಡೂರೆ ವಂದಿಸಿದರು. ಬಸವರಾಜ ಗುಂಗೆ ಹಾಗೂ ರಮೇಶ ರಾಜೋಳೆ ನಿರೂಪಣೆ ಮಾಡಿದರು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಿತು.