ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನವನಗರದ ಡಾ.ಬಿ.ಆರ್.ಅಂಬೇಡ್ಕರ ಸಭಾಭವನದಲ್ಲಿ ನಡೆದ ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿ ಉತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಮಾತನಾಡಿದರು. ಮುಂದುವರೆದು ಮಾತನಾಡಿ ಮನುಷ್ಯ ಧರ್ಮವೇ ನಿಜವಾದ ಧರ್ಮ ಎಂದು ಭೋದಿಸಿರುವ ಕರ್ಮಯೋಗಿ ಶ್ರೀ ಸಿದ್ಧರಾಮೇಶ್ವರರ ತತ್ವಾದರ್ಶಗಳು ಸರ್ವಕಾಲಕ್ಕೂ ಸಮಾಜಕ್ಕೆ ಬೆಳಕು ನೀಡುತ್ತವೆ. ಶರಣರು ಹೇಳಿರುವ ಮನಕುಲದ ಸಂದೇಶಗಳನ್ನು ಸಮಾಜದಲ್ಲಿ ಉಳಿಸುವ, ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು ಅಂದಾಗ ಶರಣರ ಕಂಡ ಸಮ ಸಮಾಜದ ನಿಮಾರ್ಣ ಮಾಡುವ ಕನಸು ನನಸು ಮಾಡಲು ಸಾಧ್ಯವಾಗುತ್ತದೆ ಎಂದರು.