ಮನೆ ಮನೆಗೂ ಕುಡಿಯುವ ನೀರು ಪೂರೈಕೆ

11ark-3
Published on

ಅರಕಲಗೂಡು: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರು ಪೂರೈಸಲು 400 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.

ತಾಲೂಕಿನ ಆನಂದೂರು, ಸುಳಗೋಡು ಮತ್ತು ನೆಹರು ನಗರ ಗ್ರಾಮದಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಾನು ಸಚಿವನಾಗಿದ್ದ ವೇಳೆ ಯೋಜನೆಯಡಿ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸಲು ಐದು ಕಡೆ ಸ್ಥಳ ಗುರುತಿಸಲಾಗಿತ್ತು. ಇದೀಗ ಮೂರು ಕಡೆ ಸ್ಥಳ ಗುರುತಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಳ್ಳಿ ಮೈಸೂರು ಹೋಬಳಿಯ ಪ್ರತಿಯೊಂದು ಗ್ರಾಮಗಳ ಮನೆಗಳಿಗೂ ಕುಡಿಯುವ ನೀರು ಒದಗಿಸಲಾಗುವುದು ಎಂದು ಹೇಳಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸಲು ಗುಣಮಟ್ಟದ ಪೈಪ್ ಅಳವಡಿಸಲಾಗುವುದು. ತಾತ್ಕಾಲಿಕವಾಗಿ ಟ್ಯಾಂಕ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. ನಂತರ ನದಿ ಮೂಲಗಳಿಂದ ನೀರು ಒದಗಿಸಲಾಗುವುದು. ಶಾಶ್ವತವಾದ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿಗಳು ಹೆಚ್ಚು ಆದ್ಯತೆ ನೀಡಬೇಕು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ನವೀನ್, ಜಿಪಂ ಇಂಜಿನಿಯರ್ ರಾಜೇಂದ್ರ, ರುದ್ರಪಟ್ಟಣ ಗ್ರಾಪಂ ಅಧ್ಯಕ್ಷ ಸಾಗರ್, ತರಿಗಳಲೆ ಗ್ರಾಪಂ ಅಧ್ಯಕ್ಷ ಶ್ರೀನಾಥ್, ದೊಡ್ಡಬೆಮ್ಮತ್ತಿ ಗ್ರಾಪಂ ಅಧ್ಯಕ್ಷೆ ಗೌರಮ್ಮ ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net