

ಬಾಗಲಕೋಟೆ: ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಸುರಕ್ಷತೆಗಾಗಿ ಸರ್ಕಾರ ರೂಪಿಸಲಾದ ಮನೆ ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲೆಯಾಧ್ಯಂತ ಬುಧವಾರ ಚಾಲನೆ ನೀಡಲಾಯಿತು.
ರಾಜ್ಯದ ಗೃಹಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳ ಮಾರ್ಗದರ್ಶನದಲ್ಲಿ ನಗರದ ದೀಪಂ ಕಾಲೋನಿ ಮತ್ತು ಮದಿನಾ ಕಾಲೋನಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಬಾಗಲಕೋಟೆ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಗುರುನಾಥ ಚವ್ಹಾಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುವ ಉದ್ದೇಶದಿಂದ ಇಂತಹದೊAದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೈಬರ್ ಅಪರಾಧ, ಕರ್ನಾಟಕ ಡ್ರಗ್ಸ್ ಫ್ರೀ ಆಪ್, ಬಾಲ್ಯವಿವಾಹ ನಿಷೇಧ ಕಾಯ್ದೆ, ಸಾಮಾಜಿಕ ಜಾಲ ತಾಣಗಳಲ್ಲಿ ಬರುವ ಸತ್ಯಾಸತ್ಯತೆ ಬಗ್ಗೆ, ದ್ವೀಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೇಟ್ ಧರಿಸುವುದು, ಕಾರಿನಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಸೇರಿದಂತೆ ಇತರೆ ಸುರಕ್ಷತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಪುರುಷ ಪೊಲೀಸ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಗಳು ಸೇರಿದ ತಂಡವು ಮನೆ ಮನೆಗೆ ತೆರಳಿ ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕರು ವಾಸಿಸುವ ಮನೆ ಮತ್ತು ವಾರ್ಡಗಳಲ್ಲಿ ಹೆಚ್ಚಿನ ಬದ್ರತೆಗಾಗಿ, ಸಿಸಿಟಿವಿ ಅಳವಡಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವದರ ಜೊತೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಣ್ಣ ಪುಟ್ಟ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಜಿಲ್ಲಾ ಕಂಟ್ರೋಲ್ ರೂಮ್ ಸಿಪಿಐ, ಬಿಟಿ ಸಿಬ್ಬಂದಿಗಳ ಮೊಬೈಲ್ ನಂಬರಗಳನ್ನು ಸಾರ್ವಜನಿಕರಿಗೆ ಕೊಟ್ಟಿದ್ದು, ತುರ್ತು ಪರಿಸ್ಥಿತಿಯಲ್ಲಿ ೧೧೨ಗೆ ಕರೆ ಮಾಡಲು ತಿಳಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಿ.ಎಸ್.ಐಗಳಾದ ಆರ್.ಎಸ್.ದೊಡಮನಿ, ಜೆ.ವೈ.ನಧಾಪ್, ಹೆಚ್ಚುವರಿ ಸಿಪಿಐಗಳಾದ ಬಿ.ಬಿ.ಕೊಳ್ಳಿ, ಶರಣೇಶ ಜಾಲಿಹಾಳ, ಎ.ಎಸ್.ಐರವರಾದ ಡಿ.ಡಿ.ದೂಳಖೇಡ, ಎಚ್.ಎಸ್.ಹೂಗಾರ, ಕೆ.ವಿ.ಗುಳಬಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.