ಮನೆ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Crime Logo
Published on

ಔರಾದ್: ಪಟ್ಟಣದ ಗಿರಣೆ ಲೇಔಟ್‌ನಲ್ಲಿ ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಬುಧವಾರ ರಾತ್ರಿ ಕಳ್ಳತನ ಮಾಡಲಾಗಿದೆ. ಪಟ್ಟಣದಲ್ಲಿ ವಾಸವಾಗಿರುವ ಬೆಳಕುಣಿ (ಭೋ) ಗ್ರಾಮದ ಸಂತೋಷ ದರಗಾವೆ ಅವರ ಬೈಕ್ ಕಳ್ಳತನವಾಗಿದೆ. ನಿತ್ಯದ ಕೆಲಸ ಮುಗಿಸಿಕೊಂಡು ಮನೆ ಮುಂದೆ ವಾಹನ ನಿಲ್ಲಿಸಿ, ಮಲಗಿದ್ದಾರೆ. ಬೆಳಗ್ಗೆ ನೋಡಿದಾಗ ಕಳ್ಳತನ ಆಗಿರುವುದು ತಿಳಿದಿದೆ. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net