ಮನೆಗಳ ಕಾಮಗಾರಿ ವೀಕ್ಷಿಸಿದ ಸಚಿವ ಸೋಮಣ್ಣ

DSC_5594
Published on

ಮೈಸೂರು: ನಗರದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಕಾಲನಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ವೀಕ್ಷಿಸಿದರು.

ಕಾಮಗಾರಿ ಸಂಬಂಧ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು, ಶಾಸಕ ಎಸ್.ಎ.ರಾಮದಾಸ್ ಉತ್ತಮವಾಗಿ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ಇದೇ ಮಾದರಿಯಲ್ಲಿ ರಾಜ್ಯದ ಇತರ ಭಾಗದಲ್ಲೂ ಮನೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net