ಮನೆಗಳಿಗೆ ನುಗ್ಗಿದ ಮಳೆ ನೀರು, ಅಧಿಕಾರಿಗಳ ವಿರುದ್ಧ ಹಿಡಿಶಾಪ ಆಹಾರ ಸಾಮಗ್ರಿ ನೀರು ಪಾಲು

02(01) (1)
Published on

ಸರ್ಜಾಪುರ: ಪಟ್ಟಣದಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಹುತೇಕ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ತುಂಬಿ ಜನ ಪರದಾಡುವಂತಾಯಿತು.

ಮಳೆ ಹೆಚ್ಚಾದ ಕಾರಣದಿಂದ ಮಳೆ ನೀರಿನೊಂದಿಗೆ ಚರಂಡಿ ತ್ಯಾಜ್ಯವೂ ಮನೆ ಹಾಗೂ ವಾಣಿಜ್ಯ ಮಳಿಗೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತ್ತು. ಕೆಲ ಮನೆಗಳಲ್ಲಿ ಆಹಾರ ಸಾಮಗ್ರಿಗಳು ಹಾಳಾಗಿವೆ. ಮಳೆ ಕಡಿಮೆಯಾದ ಬಳಿಕ ರಾತ್ರಿಯೆಲ್ಲ ನೀರು ಹೊರ ಹಾಕಿದರು. 9ನೇ ವಾರ್ಡ್‌ನಲ್ಲಿ ಒಂದು ಮನೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಸರ್ಜಾಪುರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲಾಗಿದೆ. ಈ ವೇಳೆ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಆದ್ದರಿಂದಲೇ ನೀರು ಮನೆಗಳಿಗೆ ನುಗ್ಗಿ ಸಮಸ್ಯೆಯಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರಿಪಡಿಸಬೇಕು ಎಂದು ಸರ್ಜಾಪುರ ಗ್ರಾಪಂ ಸದಸ್ಯ ಪಾರ್ಥಸಾರಥಿ ಒತ್ತಾಯಿಸಿದರು.

ತಗ್ಗು ಪ್ರದೇಶದಲ್ಲಿದ್ದ ಮನೆಗಳಿಗೆ ನೀರು ನುಗಿದ್ದು, ಗ್ರಾಪಂ ಅಧ್ಯಕ್ಷರ ನೇತೃತ್ವದಲ್ಲಿ ರಾತ್ರಿಯೇ ಮಳೆ ನೀರನ್ನು ಹೊರಹಾಕಲಾಗಿದೆ. ಈ ಭಾಗದಲ್ಲಿ ಅತೀ ಹೆಚ್ಚು ಖಾಸಗಿ ಬಡಾವಣೆಗಳು ನಿರ್ಮಾಣವಾಗಿದ್ದು, ಕೆಲವೆಡೆ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆ ಬಗೆಹರಿಸಬೇಕಿದೆ. ಸತೀಶ್, ಸರ್ಜಾಪುರ ಗ್ರಾಪಂ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net