ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

IMG-20230826-WA0326
ಆಲೂರು ತಾಲೂಕಿನ ಕಾಮತಿ ಗ್ರಾಮದಲ್ಲಿ ಮನೆಗೆ ಬೆಂಕಿ ತಗುಲಿ ಗೃಹೋಪಯೋಗಿ ವಸ್ತುಗಳು ಸುಟ್ಟುಕರಕಲಾಗಿರುವುದು.
Published on

ಆಲೂರು: ತಾಲೂಕಿನ ಕಾಮತಿ ಗ್ರಾಮದಲ್ಲಿ ಶನಿವಾರ ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ರತ್ನಮ್ಮ ಎಂಬುವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಮನೆಯಲ್ಲಿನ ಟಿವಿ, ಹೋಮ್ ಥಿಯೇಟರ್, ಪೀಠೋಪಕರಣಗಳು, ಬೀರುವಿನಲ್ಲಿಟ್ಟಿದ್ದ 30 ಸಾವಿರ ಹಣ, ಬಟ್ಟೆಗಳು, ಅಡುಗೆ ಪಾತ್ರೆಗಳು ಸೇರಿ ಲಕ್ಷ ರೂ.ಗಳಿಗೂ ಅಧಿಕ ಹಾನಿಯಾಗಿದೆ ಎಂದು ಕುಟುಂಬದವರು ಅಂದಾಜಿಸಿದ್ದಾರೆ.

ಶನಿವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಬಿದ್ದ ಸಂದರ್ಭದಲ್ಲಿ ಮನೆಯವರು ಜಮೀನು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಬೆಂಕಿ ಹೊತ್ತಿರುವುದನ್ನು ತಿಳಿದ ಪಕ್ಕದ ಮನೆಯವರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಕಾಮತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net