

ಯಾದಗಿರಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವಂತೆ ಹಾಗೂ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿ ಗೌರವ ಸಲ್ಲಿಸುವಂತೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ಮನವಿ ಮಾಡಿದ್ದಾರೆ.
ಸೋಮವಾರ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ಪ್ರದಶರ್ಿಸಿ ಮಾತನಾಡಿ, ಧ್ವಜಾರೋಹಣ ಸಂಧರ್ಭದಲ್ಲಿ ಧ್ವಜ ಸಂಹಿತೆಯನ್ನು ಪಾಲಿಸಿ, ಗೌರವ ಅಪರ್ಿಸಬೇಕು. ಸಾರ್ವಜನಿಕರು ಮನೆಗಳ, ಸಕರ್ಾರಿ ಕಚೇರಿಗಳ ಮೇಲೆ, ಸಾರ್ವಜನಿಕ ಸ್ಥಳಗಳು, ಉದ್ಯಮಗಳು, ಸಂಘ-ಸಂಸ್ಥೆಗಳಲ್ಲಿ ಸ್ವಯಂ ಪ್ರೇರಿತರಾಗಿ ಧ್ವಜಾರೋಹಣ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಹರ್ ಘರ್ ತಿರಂಗಾ ರಾಷ್ಟ್ರಭಕ್ತಿಯ ದ್ಯೋತಕವಾಗಿದೆ. ಜಿಲ್ಲೆಯಲ್ಲಿ ಈ ಅಭಿಯಾನ ಅಭೂತಪೂರ್ವವಾಗಿ ಯಶಸ್ವಿಗೊಳಿಸಬೇಕು. ಅದರಂತೆ ರಾಷ್ಟ್ರ ಧ್ವಜಾರೋಹಣ ಮಾಡಿದ ಬಗ್ಗೆ ಸೆಲಿಗಳನ್ನು ಹರ್ ಘರ್ ತಿರಂಗಾ ಹ್ಯಾಶ್ ಟ್ಯಾಗ್ ಮೂಲಕ ವೆಬ್ ಸೈಟ್ ದಲ್ಲಿ ಅಪ್ಲೋಡ್ ಸಹ ಮಾಡುವಂತೆ ತಿಳಿಸಿದರು.
ಜಿಪಂ ಸಿಇಒ ಗರೀಮಾ ಪನ್ವಾರ್, ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಉತ್ತರಾದೇವಿ ಮಠಪತಿ ಸಿಬ್ಬಂದಿ ಇದ್ದರು.