ಮನೆಯಲ್ಲೇ ತ್ಯಾಜ್ಯ ವಿಂಗಡಿಸಿ : ಪಪಂ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಸಲಹೆ

IMG20230609111616
Published on

ಚಾಮರಾಜನಗರ : ಹಸಿ ಮತ್ತು ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ವಿಲೇವಾರಿ ಮಾಡುವುದರ ಮೂಲಕ ಪಟ್ಟಣದ ಸ್ವಚ್ಛತೆಗೆ ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ತಿಳಿಸಿದರು.


ಪೌರಾಡಳಿತ ನಿರ್ದೇಶನಾಲಯ ಹಾಗೂ ಸಿಟಿ ಮ್ಯಾನೇಜರ್ ಅಸೋಸಿಯೇಷನ್ ವತಿಯಿಂದ ಘನತ್ಯಾಜ್ಯ ನಿರ್ವಹಣೆ ಕುರಿತು ಹನೂರು ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ವಾರ್ಡುಗಳಲ್ಲಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸುವಂತೆ ಹಲವು ಬಾರಿ ಅರಿವು ಮೂಡಿಸಿದ್ದರೂ ಬಹುತೇಕ ಜನರು ಇದನ್ನು ಪಾಲನೆ ಮಾಡುತ್ತಿಲ್ಲ. ಇದರಿಂದ ಸ್ವಚ್ಛತೆಗೆ ತೊಡಕಾಗಿ ಪರಿಣಮಿಸಿದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರು ಮನೆಗಳಲ್ಲಿ ಪಾಲಕರಿಗೆ ಅರಿವು ಮೂಡಿಸಬೇಕು. ಆ ಮೂಲಕ ವಿಂಗಡಿಸಿದ ಕಸವನ್ನು ಆಯಾ ದಿನವೇ ವಿಲೇವಾರಿ ಮಾಡಬೇಕು. ಇದರಿಂದ ಸ್ವಚ್ಛತೆ ಕಾಪಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.


ಪೌರಾಡಳಿತ ನಿರ್ದೇಶನಾಲಯದ ಸಂಯೋಜಕ ಡಾ.ಹರೀಶ್ ಕುಮಾರ್, ವ್ಯವಸ್ಥಾಪಕಿ ವಿಜಯಲಕ್ಷ್ಮೀ, ಸದಸ್ಯರಾದ ಗಿರೀಶ್, ಹರೀಶ್ ಕುಮಾರ್, ಪವಿತ್ರಾ, ಆರೋಗ್ಯಾಧಿಕಾರಿ ಭೂಮಿಕಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net