ಮನ್ ಕಿ ಬಾತ್ ವೀಕ್ಷಿಸಿದ ಛಲವಾದಿ ನಾರಾಯಣಸ್ಚಾಮಿ

27rajesh6
Published on

ಚಾಮರಾಜನಗರ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ವೀಕ್ಷಣೆ ಮಾಡಿದರು.

ನಗರದ ಕುಲುಮೆ ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಛಲವಾದಿ ನಾರಾಯಣಸ್ವಾಮಿ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 115 ನೇ ಆವೃತ್ತಿ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು. ಬಳಿಕ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಒಂದು ವಿಶಿಷ್ಠವಾದ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ದೇಶದ ಸಾಧಕರನ್ನು ನೇರವಾಗಿ ಮಾತನಾಡಿಸಿ, ಅವರ ಪ್ರತಿಭೆಯನ್ನು ದೇಶಕ್ಕೆ ಪರಿಚಯ ಮಾಡಿಕೊಡಲಾಗುತ್ತಿದೆ. ಈ ಅವರನ್ನು ಮೂಲಕ ಪೋತ್ಸಾಹಿಸುವ ಕೆಲಸ ಮಾಡಲಾಗುತ್ತಿರುವುದು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜ್, ಮಾಜಿ ಅಧ್ಯಕ್ಷ ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಎಸ್ಸಿ ಮೋರ್ಚಾದ ಅಧ್ಯಕ್ಷ ಮೂಡಹಳ್ಳಿ ಮೂರ್ತಿ, ಉಪಾಧ್ಯಕ್ಷೆ ಪದ್ಮ, ಜಿಲ್ಲಾ ಕಾರ್ಯದರ್ಶಿ ಸರಸ್ವತಿ, ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಮಣ್ಣ, ಮುತ್ತಿಗೆ ಮೂರ್ತಿ, ಕಾರ್ಯದರ್ಶಿ ಚೆನ್ನಬಸವಯ್ಯ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net