ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸಾವು

Published on

ಬೀದರ್: ತೆಲಂಗಾಣದ ಜಹೀರಾಬಾದ್ ರಸ್ತೆಯ ದೇವದೇವ ವನ ಸಮೀಪ ಗುರುವಾರ ರಾತ್ರಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ನಗರದ ನಿವಾಸಿ ಕಾರು ಚಾಲಕ ಶಾಂತಕುಮಾರ (28) ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ವಿದ್ಯಾಸಾಗರ (30) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಜಹೀರಾಬಾದ್​ನಿಂದ ಬೀದರ್ ಕಡೆಗೆ ಬರುತ್ತಿದ್ದಾಗ ಅವಘಡ ಸಂಭವಿಸಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net