ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸಾವು

19 YLP 02
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಚಿಕ್ಕಮಾವಳ್ಳಿ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿ ಅಯೋಧ್ಯಾನಗರದ ಹಜರತ್ ಅಲಿ ನನ್ನೇಸಾಬ್ ಖಾಜಿಗಾರ (38) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿದ್ದ ಕೊಪ್ಪಳದ ಗಂಗಾವತಿ ಡಿಪೋದ ಕೆಎಸ್​ಆರ್​ಟಿಸಿ ಬಸ್ ಚಾಲಕ ಯಮನಪ್ಪ ಮಲ್ಲಪ್ಪ ಹಾದಿಮನಿ ಎಂಬುವರು ಗಾಯಗೊಂಡಿದ್ದಾರೆ. ಕಾರು ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net