

ಸೊರಬ: ತಾಲೂಕಿನ ಹಳೇಸೊರಬ ಕೆರೆ ಬಳಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿರಸಿಯ ಸಂತೋಷ್ (25) ಮೃತ ದುರ್ದೈವಿ. ಶಿರಸಿಯಿಂದ ಸೊರಬದ ತವನಂದಿ ಮಾರ್ಗವಾಗಿ ಆಗಮಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಚಾಲಕ ರಾಘವ ಹಾಗೂ ಗಣಪತಿ ಎಂಬುವರಿಗೆ ತೀವ್ರ ಗಾಯವಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿರಸಿಗೆ ಕಳಿಸಲಾಗಿದೆ.
ಸ್ಥಳಕ್ಕೆ ಸಿಪಿಐ ಆರ್.ಡಿ.ಮರುಳುಸಿದ್ದಪ್ಪ, ಪಿಎಸ್ಐ ಟಿ.ಬಿ. ಪ್ರಶಾಂತ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.