ಮರಕ್ಕೆ ಡಿಕ್ಕಿ ಹೊಡೆದ ಕಾರು

19 YLP 04
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರು ಚಾಲಕ ಹುಬ್ಬಳ್ಳಿಯ ಅಕ್ಷಯ ಕಾಲನಿಯ ಅಜರುದ್ದೀನ್, ಧಾರವಾಡ ಜಿಲ್ಲೆ ಅಣ್ಣಿಗೇರಿಯ ದಾದಾಪೀರ್, ಕಾಸಿಂ, ಖಾಜಾಫಿರ್ ಹಾಗೂ ಹನುಮಂತ ಗಾಯಗೊಂಡವರು. ಇವರು ಕಾರಿನಲ್ಲಿ ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಹೊರಟಾಗ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net