ಮರದ ದಿಮ್ಮಿ ಸಾಗಿಸುತ್ತಿದ್ದ ಮೂರು ಲಾರಿಗಳು ವಶ

ಚಿತ್ರ 14ಎಸ್ ಡಿ ಪಿ 01
Published on

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಭಾರಿ ಸರಕು ವಾಹನಗಳ ಸಂಚಾರಕ್ಕೆ ನಿಷೇಧವಿರುವ ಹಿನ್ನೆಲೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿದ ಮೂರು ಲಾರಿಗಳನ್ನು ಭಾನುವಾರ ರಾತ್ರಿ ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದರು.

ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ ಮೂರು ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಸಹಾಯಕ ಠಾಣಾಧಿಕಾರಿ ಶ್ರೀನಿವಾಸ್, ಅಪರಾಧ ಪತ್ತೆ ದಳದ ಸಿಬ್ಬಂದಿ ಪ್ರಸನ್ನ, ಮಣಿಕಂಠ ಇತರರು ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net