ಮರದ ಬಿದ್ದು ಕಾರ್ಮಿಕ ಸಾವು

23spt3-Ravi
Published on


ಕೊಡಗು : ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದಲ್ಲಿ ತಲೆ ಮೇಲೆ ಮರದ ಕೊಂಬೆ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾರೆ. ಕಿಬ್ಬೆಟ್ಟ ಅಯ್ಯಪ್ಪ ಕಾಲನಿ ನಿವಾಸಿ ಚಂದ್ರ ಎಂಬುವರ ಪುತ್ರ ಕೆ.ಸಿ.ರವಿ(23)ಮೃತಪಟ್ಟವರು. ಗುರುವಾರ ಮಧ್ಯಾಹ್ನ ಗ್ರೀನ್‌ಲ್ಯಾಂಡ್ ತೋಟದಲ್ಲಿ ಸಿಲ್ವರ್ ಮರಗಳನ್ನು ಕಡಿಯುವ ಸಂದರ್ಭ ರೆಂಬೆಯೊಂದು ತಲೆ ಮೇಲೆ ಬಿದ್ದು ರವಿ ಗಾಯಗೊಂಡಿದ್ದರು. ಕೂಡಲೇ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net