ಮರಳು ಬ್ಲಾಕ್‌ಗಳ ಜಂಟಿ ಪರಿಶೀಲನೆಗೆ ಡಿಸಿ ಸೂಚನೆ

ಮರಳು ಬ್ಲಾಕ್‌ಗಳ ಜಂಟಿ ಪರಿಶೀಲನೆಗೆ ಡಿಸಿ ಸೂಚನೆ
Published on

 ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 25 ಮರಳು ಬ್ಲಾಕ್‌ಗಳನ್ನು ಪುನಃ ಒಂದು ತಂಡ ರಚನೆ ಮಾಡಿ ಜಂಟಿಯಾಗಿ ಪರಿಶೀಲನೆ ಮಾಡಿ 15 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಳು ಬ್ಲಾಕ್ ಗುರುತಿಸಿದಾಗ ಅದಕ್ಕಿರುವ ರಸ್ತೆ ಸಂಪರ್ಕದ ಬಗ್ಗೆ ಕೂಡ ಮ್ಯಾಪಿಂಗ್ ಮೂಲಕ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಿಗದಿತ ಪ್ರಮಾಣಕ್ಕಿಂತ ಅಧಿಕ ಪ್ರಮಾಣದಲ್ಲಿ ಮರಳು ತುಂಬಿ ಲಾರಿಗಳು ಸಂಚರಿಸುವುದರಿಂದ ರಸ್ತೆಗಳು ಹಾಳಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಿ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net