ಮರಾಠೆಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

5BGV_Ravig5
ಬೆಳಗಾವಿಯ ಸಾಹಿತಿ ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ, ಸಿ.ಸೋಮಶೇಖರ, ಡಾ.ಸರಜೂ ಕಾಟ್ಕರ್, ಡಾ.ಎ.ಬಿ.ಘಾಟಗೆ, ಮೀರಾ ಮರಾಠೆ, ಡಾ.ಪಿ.ಜಿ.ಕೆಂಪಣ್ಣವರ, ರಮೇಶ ಪರವಿನಾಯ್ಕರ, ವಿದ್ಯಾವತಿ ಭಜಂತ್ರಿ ಇದ್ದರು.
Published on

ಬೆಳಗಾವಿ: 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಬೆಳಗಾವಿಯ ಸಾಹಿತಿ ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಾಮಕೃಷ್ಣ ಮರಾಠೆ ಅವರಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸರ್ಕಾರದ ಪರವಾಗಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಲಾಯಿತು. ಶಾಸಕ ಅನಿಲ ಬೆನಕೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ, ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ, ಹಿರಿಯ ಸಾಹಿತಿಗಳಾದ ಡಾ.ಸರಜೂ ಕಾಟ್ಕರ್, ಡಾ.ಎ.ಬಿ.ಘಾಟಗೆ, ಸಾಹಿತಿ ಮರಾಠೆ ಅವರ ಪತ್ನಿ ಮೀರಾ, ಡಾ.ಪಿ.ಜಿ.ಕೆಂಪಣ್ಣವರ, ರಂಗಾಯಣ ಧಾರವಾಡ ನಿರ್ದೇಶಕ ರಮೇಶ ಪರವಿನಾಯ್ಕರ, ಕನ್ನಡ ಹೋರಾಟಗಾರ ಅನಂತಕುಮಾರ ಬ್ಯಾಕೂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net