ಮರುಳ ಸಿದ್ದೇಶ್ವರಸ್ವಾಮಿ ರಥೋತ್ಸವ ಸಂಭ್ರಮ

01arsph2ep
ಅರಸೀಕೆರೆ ತಾಲೂಕಿನ ಬೆಂಡೇಕೆರೆ ಗ್ರಾಮದ ಶ್ರೀಮರುಳಸಿದ್ದೇಶ್ವರಸ್ವಾಮಿ ರಥೋತ್ಸವ.
Published on

ಅರಸೀಕೆರೆ: ತಾಲೂಕಿನ ಬೆಂಡೇಕೆರೆ ಗ್ರಾಮದ ಶ್ರೀ ಮರುಳ ಸಿದ್ದೇಶ್ವರಸ್ವಾಮಿ ರಥೋತ್ಸವ ಮಂಗಳವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವಕ್ಕೂ ಮುನ್ನ ದೇಗುಲದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಮಂಗಳವಾದ್ಯದೊಂದಿಗೆ ದೇವರನ್ನು ಸರ್ವಾಲಂಕೃತ ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಹಣ್ಣು, ದವನ ಎಸೆಯುವ ಮೂಲಕ ಭಕ್ತರು ರಥ ಎಳೆದು ಸಂಭ್ರಮಿಸಿದರು. ಬೆಂಡೇಕೆರೆ, ಕಾನಿಹಳ್ಳಿ, ನಾಗತಿಹಳ್ಳಿ, ಹರಿಹರಪುರ, ಭೈರನಾಯ್ಕನಹಳ್ಳಿ, ಚಿಕ್ಕೂರು, ಲಾಯಲಾಪುರ ಸೇರಿ ಸುತ್ತ್ತಲ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಚಲುವರಾಯ, ಧೂತರಾಯ ಸ್ವಾಮಿ ಕುಣಿತ ನೋಡುಗರನ್ನು ರಂಜಿಸಿತು. ದೇವಾಲಯ ಸಮಿತಿಯಿಂದ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net