ಮಲಗಿದ ಸ್ಥಿತಿಯಲ್ಲಿ ಯುವಕ ಮೃತ

Crime Logo
Published on
ಚಾಮರಾಜನಗರ: ತಾಲೂಕಿನ ಕುದೇರು ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಮಲಗಿದ ಸ್ಥಿತಿಯಲ್ಲಿ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಯಳಂದೂರು ತಾಲೂಕಿನ ಅಗರ ಗ್ರಾಮದ ಎಸ್.ಪ್ರದೀಪ್ (25) ಮೃತ ಯುವಕ. ಈತ ಬುಧವಾರ ರಾತ್ರಿಯ ವೇಳೆಯಲ್ಲಿ ಕುದೇರು ಬಸ್ ನಿಲ್ದಾಣದ ಅಂಗಡಿಯೊಂದರ ಮುಂಭಾಗ ಮಲಗಿದ್ದರು. ಗುರುವಾರ ಬೆಳಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net