ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ

MUNAVALLI
ಮುನವಳ್ಳಿ ಸಮೀಪದ ನವಿಲುತೀರ್ಥ ಜಲಾಶಯದಿಂದ ಶನಿವಾರ ಐದು ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಯಿತು.
Published on

ಮುನವಳ್ಳಿ: ಸಮೀಪದ ಮಲಪ್ರಭಾ ನವಿಲುತೀರ್ಥ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯ ರೇಣುಕಾಸಾಗರ ಅಣೆಕಟ್ಟು ಭರ್ತಿಯಾಗಲು ಕೇವಲ 6 ಅಡಿ ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರ 5,000 ಕ್ಯೂಸೆಕ್​ ನೀರನ್ನು ಜಲಾಶಯದಿಂದ ಹೊರಬಿಡಲಾಗಿದೆ ಎಂದು ನೀರಾವರಿ ಇಲಾಖೆಯ ಸಹಾಯಕ ಅಭಿಯಂತ ವಿವೇಕ ಮುದಿಗೌಡ್ರ. ಕೆ.ಬಿ.ಸಜ್ಜನಶೆಟ್ಟಿ ಮಾಹಿತಿ ನೀಡಿದ್ದಾರೆ.

ಮಲಪ್ರಭಾ ನದಿ ಪಾತ್ರದ ಗ್ರಾಮಗಳ ಜನತೆ ಕಷಿ ಪಂಪ್​ಸೆಟ್​ಗಳನ್ನು ಸುರತ ಸ್ಥಳಗಳಿಗೆ ರವಾನೆ ಮಾಡಬೇಕು. ಮಳೆ ಪ್ರಮಾಣ ಹೆಚ್ಚಾಗಿ ಒಳಹರಿವು ಹೆಚ್ಚಾದಲ್ಲಿ ಯಾವುದೇ ಸಂದರ್ಭದಲ್ಲಿ ಜಲಾಶಯದಿಂದ ಇನ್ನೂ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇದ್ದು, ನದಿಪಾತ್ರದ ಗ್ರಾಮಗಳ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net