ಸುಂಟಿಕೊಪ್ಪ: ಸುಂಟಿಕೊಪ್ಪ ಮಲಯಾಳಿ ಸಮಾಜದ 2025-26ನೇ ಸಾಲಿನ ಅಧ್ಯಕ್ಷರಾಗಿ ಆರ್.ರಮೇಶ್ ಪಿಳ್ಳೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಸ್.ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ.
ಸುಂಟಿಕೊಪ್ಪ ಮಂಜನಾಥಯ್ಯ-ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಮಾಜದ ಅಧ್ಯಕ್ಷ ಎಂ.ಆರ್.ಶಶಿಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ವಾಸುದೇವ, ಟಿ.ಕೆ.ಹರೀಶ್, ಖಜಾಂಚಿ ಕೆ.ಅನೀಶ್, ಸಹ ಕಾರ್ಯದರ್ಶಿಗಳಾಗಿ ಗಿರೀಶ್, ಜಿ.ಪಿ.ಅನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಗಳಾಗಿ ಕೆ.ರಾಜೇಶ್, ವಿ.ಕೆ.ರಾಜು, ಕ್ರೀಡಾ ಕಾರ್ಯದರ್ಶಿ ಗಳಾಗಿ ಪಿ.ಸಿ.ಸುರೇಶ್, ಪಿ.ಆರ್.ಬಿಜು, ಗೌರವಾಧ್ಯಕ್ಷರಾಗಿ ಭಾಸ್ಕರನ್, ವೇಲಾಯುಧನ್ ಹಾಗೂ ಆರು ಮಂದಿ ಸಲಹಾ ಸಮಿತಿ ಸದಸ್ಯರು ಮತ್ತು ಎಂಟು ಮಂದಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.