ಮಲೆನಾಡ ಸಂಬಂಧ ಬೆಳೆಸಿದ ಲಕ್ಷ್ಮೀ ಹೆಬ್ಬಾಳ್ಕರ್

17 smg 11
Published on

ಶಿವಮೊಗ್ಗ: ಬೆಳಗಾವಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಕುಟುಂಬಗಳ ನಡುವೆ ನೆಂಟಸ್ತಿಕೆ ಬೆಳೆದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅವರು ಸಂಗಮೇಶ್ವರ್ ಸಹೋದರ ಬಿ.ಕೆ. ಶಿವಕುಮಾರ್ ಪುತ್ರಿ ಹಿತಾ ಅವರನ್ನು ವರಿಸಲಿದ್ದು, ಸೋಮವಾರ ಶಿವಮೊಗ್ಗದಲ್ಲಿ ನಿಶ್ಚಿತಾರ್ಥ ನೆರವೇರಿತು. ಮೃಣಾಲ್ ಮತ್ತು ಹಿತಾ ಪರಸ್ಪರ ವಜ್ರದ ಉಂಗುರ ಬದಲಾವಣೆ ಮಾಡಿಕೊಂಡರು. ಮದುವೆ ನವಂಬರ್ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿದೆ ಎಂಧು ಗೊತ್ತಾಗಿದೆ.

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಬಿ.ಕೆ. ಸಂಗಮೇಶ್ವರ ಕುಟುಂಬದಿಂದ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಗೌರವರಿಸಲಾಯಿತು. ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತರೀಕೆರೆ ಶಾಸಕ ಡಿ.ಎಸ್.ಸುರೇಶ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ಎನ್.ರಮೇಶ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net