ಮಲೆನಾಡು ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಯೋಜನೆ

ಮಲೆನಾಡು ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಯೋಜನೆ
Published on

ಹಾಸನ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಾಫ್ಟ್‌ವೇರ್ ತಾಂತ್ರಿಕತೆ ತರಬೇತಿ ಉದ್ಯೋಗ ಸಿಗಲು ಸಹಾಯವಾಗುತ್ತದೆ. ಇದೆ ಅಕ್ಟೋಬರ್‌ನಿಂದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ 5 ಮತ್ತು 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಈ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಸ್ಟೇಫಂಡ್ ಸಹ ನಿಡಲಾಗುವುದು ಎಂದು ಇನ್ಫೋಸಿಸ್ ಆಡಳಿತಾಧಿಕಾರಿಗಳಾದ ರಾಜೇಶ್ವರ ರಾವ್ ತಿಳಿಸಿದರು.
ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರಿನ ಇನ್ಫೋಸಿಸ್ ಪೇನಾಕಲ್ ಕಂಪನಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಲಿರುವ ಸಾಫ್ಟ್‌ವೇರ್ ತಾಂತ್ರಿಕತೆ ತರಬೇತಿ ಬಗ್ಗೆ ಶುಕ್ರವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಾಕಷ್ಟು ಪ್ರಮಾಣದಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳು ಕೆಲಸಕ್ಕೆ ಬರುತ್ತಿದ್ದಾರೆ. ಆದರೆ, ಎಲ್ಲರಿಗೂ ಕೆಲಸ ಸಿಗುವುದಿಲ್ಲ. ಈಗ ನಾವು ತರಬೇತಿ ನಿಡುವ ಜತೆಗೆ ತರಬೇತಿಯಲ್ಲಿ ಅಯ್ಕೆಯಾದ ವಿದ್ಯಾರ್ಥಿಗಳಿಗೆ ಉದ್ಯೋಗ ನಿಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಪೆನಾಕಲ್ ಮುಖ್ಯಸ್ಥ ಕಾರ್ತಿಕ್ ಮಾತನಾಡಿ, 5ನೇ ಸೇಮೀಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು. ಅಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ ನಿಡಿ ಉದ್ಯೋಗಕ್ಕೆ ಅಯ್ಕೆ ಮಾಡಿಕೊಳ್ಳಲಾಗುವುದು. ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇನ್ಫೋಸಿಸ್ ಆಡಳಿತ ಅಧಿಕಾರಿ ಕೃಷ್ಣಸ್ವಾಮಿ ಸುಬ್ಬರಾವ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಟಿ.ದ್ಯಾವೇಗೌಡರು, ವ್ಯವಸ್ಥಾಪಕ ಶಿವರಾಮ್ ಕೃಷ್ಣಯ್ಯ, ಕಾಲೇಜಿನ ಪ್ರಾಂಶುಪಾಲ ಡಾ.ಎ.ಜೆ. ಕೃಷ್ಣಯ್ಯ, ಕಾಲೇಜಿನ ಮೀ ರೈಜ್ ಫೌಂಡೆಷನ್ ಕಾರ್ಯ ನಿರ್ವಹಣಾಧಿಕಾರಿ ಗೀತಾ ಕಿರಣ್, ಪ್ರಾಧ್ಯಾಪಕ ಪ್ರೊ ಬಿ.ಬಿ. ನಿಲಕಂಠಪ್ಪ ಹಾಗೂ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net