ಮಲೆನಾಡು ಜಿಲ್ಲೆಗಳ ಬಂದ್​ಗೆ ನಿರ್ಣಯ

18 CKM 4.jpg web 2
Published on

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ಕಾಫಿ ಬೆಳೆಯುವ ಜಿಲ್ಲೆಗಳನ್ನು ಬಂದ್ ಮಾಡಲು ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ಹಾಗೂ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು.
ಕಸ್ತೂರಿ ರಂಗನ್ ವರದಿ ಅನುಷ್ಠಾನ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಮಲೆನಾಡು ಬಂದ್ ಘೊಷಣೆಯೊಂದಿಗೆ ಜು.27 ರಂದು ಹಾಸನ, 28ಕ್ಕೆ ಕೊಡಗು, 29ರಂದು ಚಿಕ್ಕಮಗಳೂರು ಜಿಲ್ಲೆ ಬಂದ್ ಮಾಡಲು ನಿರ್ಧರಿಸಲಾಯಿತು.
ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂದಿಸಿದಂತೆ ಕೇಂದ್ರ ಪರಿಸರ ಇಲಾಖೆ ಜು.4ರಂದು ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು 60 ದಿನ ಕಾಲಾವಕಾಶ ನೀಡಲಾಗಿದೆ. ಹಾಗಾಗಿ ಬೆಳೆಗಾರರು ಹಾಗೂ ಗ್ರಾಮಸ್ಥರ ಆಕ್ಷೇಪಣೆಗಳನ್ನು ಪರಿಗಣಿಸಿ ಸ್ಥಳೀಯರ ನಿರ್ಣಯಕ್ಕೆ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲು ಮುಂದಾಗಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯುವ ಸಲುವಾಗಿ ನಾಲ್ಕು ಹಂತದ ಚಳವಳಿಗೆ ಸಭೆಯಲ್ಲಿ ತೀರ್ವನಿಸಲಾಯಿತು.
ಎಚ್.ಟಿ.ಮೋಹನ್​ಕುಮಾರ್, ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯ್ಕುಮಾರ್, ವಿವಿಧ ಪಕ್ಷ ಸಂಘಟನೆಗಳ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net