ಮಲೇರಿಯಾ, ಡೆಂಘ್ಯೆ, ಚಿಕುನಗುನ್ಯಾ ತಡೆಗೆ ಕ್ರಮ

bkt-15-1
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಽಕಾರಿ ಪಿ.ಸುನೀಲ್‌ಕುಮಾರ ಜಾಗೃತಿ ಪೋಸ್ಟರ ಬಿಡುಗೆಗೊಳಿಸಿದರು.
Published on

ಬಾಗಲಕೋಟೆ: ಮುಂಗಾರು ಪ್ರಾರಂಭವಾಗಿದ್ದು, ಮಲೇರಿಯಾ, ಡೆಂಘ್ಯೆ ಮತ್ತು ಚಿಕುಗುಂನ್ಯಾ, ಮೆದುಳು ಜ್ವರ ಹಾಗೂ ಆನೆಕಾಲು ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಽಕಾರಿ ಪಿ.ಸುನೀಲ್‌ಕುಮಾರ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಮಳೆಗಾಲ ಆರಂಭವಾಗುವದರಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಕೀಟಜನ್ಯ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುವದರಿಂದ ಸೊಳ್ಳೆಗಳನ್ನು ನಾಶಮಾಡಲು ಕೀಟನಾಶಕ ಸಿಂಪಡಿಸಿ ದಿನನಿತ್ಯ ಸೊಳ್ಳೆ ಪರದೆಯನ್ನು ಉಪಯೋಗಿಸುವದರಿಂದ ಮಾರಕ ರೋಗಗಳಿಂದ ರಕ್ಷಣೆ ಪಡೆಯಬಹುದಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ನೀರು ಶೇಖರೆಯಾಗುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮವಹಿಸಬೇಕು. ನಿರುಪಯುಕ್ತ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳುವುದರ ಜೊತೆಗೆ ಶೀಘ್ರ ಹಾಗೂ ಸೂಕ್ತ ವಿಲೇವಾರಿಗೆ ಕ್ರಮವಹಿಸಬೇಕು. ಮಳೆ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚತಕ್ಕದ್ದು. ಸಾರ್ವಜನಿಕ ನಲ್ಲಿ ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿದುಹೋಗುವಂತೆ ಸೂಕ್ತ ಚರಂಡಿ ವ್ಯವಸ್ಥೆ ಜೊತೆಗೆ ಚರಂಡಿಯೊಳಗೆ ಇರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ಸೂಚಿಸಿದರು.

ಮನೆಯ ಒಳಗಡೆ ಗೋಡೆ, ಬಾಗಿಲುಗಳ ಮೇಲೆ ಕೀಟನಾಶಕಗಳನ್ನು ಸಿಂಪಡಿಸುವದರಿಂದ ಸೊಳ್ಳೆ ಸಾಯುತ್ತವೆ ಹಾಗೂ ರೋಗ ತಡೆಗಟ್ಟಲು ಸಾಧ್ಯ. ಕೀಟ ನಾಶಕ ಸಿಂಪಡಣಾ ಕಾರ್ಯಕರ್ತರು ನಿಮ್ಮ ಮನೆಗೆ ಬಂದಾಗ ತಪ್ಪದೇ ಎಲ್ಲಾ ಕೋಣೆಗಳಿಗೆ ಕೀಟನಾಶಕ ಸಿಂಪಡಣೆ ಮಾಡಿಸಬೇಕು. ಸೊಳ್ಳೆ ಪರದೆ ದಿನನಿತ್ಯ ಉಪಯೋಗಿಸಿ, ಸೊಳ್ಳೆ ಕಡಿತದಿಂದ ಹರಡುವ ರೋಗಗಳಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹಗಲು ಹೊತ್ತಿನಲ್ಲಿ ಸಹ ಮನೆಯಲ್ಲಿ ಮಲಗಿರುವಾಗ ಮಕ್ಕಳು, ಗರ್ಭಿಣಿಯರು, ವಯೋವೃದ್ಧ್ದರು ಹಾಗೂ ರೋಗಿಗಳು ಕಡ್ಡಾಯವಾಗಿ ಸೊಳ್ಳೆ ಪರದೆ ಉಯೋಗಿಸಬೇಕು ಎಂದು ತಿಳಿಸಿದರು.

ಕೀಟಜನ್ಯ ರೋಗ ನಿಯಂತ್ರಣ ಕಾರ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕಾ ಇಲಾಖೆಗಳ ಪಾತ್ರವು ಮುಖ್ಯಮಾಗಿದೆ. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಡಾ.ಕುಸುಮಾ ಮಾಗಿ ಮಾತನಾಡಿ, ಮಲೇರಿಯಾ, ಡೆಂಘ್ಯೆ, ಚಿಕುಗುಂನ್ಯಾ ಪ್ರಕರಣಗಳು ಬಾಗಲಕೋಟೆ, ಬಾದಾಮಿ ಹಾಗೂ ಹುನಗುಂದದಲ್ಲಿ ಮಾತ್ರ ಹೆಚ್ಚಾಗಿ ಕಂಡುಬಂದಿರುತ್ತವೆ. ಎಲ್ಲರಿಗೂ ಸೊಳ್ಳೆ ಪರದೆ ನೀಡಲಾಗಿದೆ. ಇವುಗಳ ನಿಯಂತ್ರಣಕ್ಕಾಗಿ ಕೀಟ ನಾಶಕ ಸಿಂಪರಣೆ, ಸೊಳ್ಳೆ ಪರದೆ ವಿತರಣೆ, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಮತ್ತು ಲಾರ್ವಾಗಳ ನಿಯಂತ್ರಣ, ನೀರಿನ ತಾಣಗಳ ಸಮೀಕ್ಷೆ, ಅಂತಹ ಸ್ಥಳಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಚಾರ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಸಮೀಕ್ಷಣಾಽಕಾರಿ ಡಾ.ವಿಜಯ ಕಂಠಿ, ಆರ್‌ಸಿಎಚ್ ಅಽಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ವಿಶ್ವ ಆರೋಗ್ಯ ಸಂಸ್ಥೆಯ ಸರ್ವೆಲನ್ಸ್ ಅಽಕಾರಿ ಮುಕುಂದ ಗಲಗಲಿ, ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯಾಽಕಾರಿ ಡಾ.ಸಂಗಮ ಸೇರಿದಂತೆ ಆಯಾ ತಾಲೂಕಿನ ವೈದ್ಯಾಽಕಾರಿಗಳು ಉಪಸ್ಥಿರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net