ಮಲೇರಿಯಾ ಮುಕ್ತ ಭಾರತ ಮಾಡಲು ಸಹಕರಿಸಿ

SRP Maleriya
ಶ್ರೀರಂಗಪಟ್ಟಣದ ಕ್ಷೇತ್ರ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಮಲೇರಿಯಾ ವಿರೋಧಿ ಮಾಸಚರಣೆ ಕಾರ್ಯಕ್ರಮದಲ್ಲಿ ಸೊಳ್ಳೆಗಳ ನಿಯಂತ್ರಣದ ಕುರಿತು ಜಾಗೃತಿ ಫಲಕಗಳ ಪ್ರದರ್ಶಿಸಲಾಯಿತು.
Published on

ಶ್ರೀರಂಗಪಟ್ಟಣ: 2025ರ ವೇಳೆಗೆ ಮಲೇರಿಯಾ ಮುಕ್ತ ಭಾರತ ಮಾಡಲು ಈಗಿನಿಂದಲೇ ಅಗತ್ಯ ಕ್ರಮಗಳನ್ನು ಜರುಗಿಸಿ ನಮ್ಮ ಕ್ಷೇತ್ರವನ್ನು ಮಲೇರಿಯಾ ತಾಲೂಕನ್ನಾಗಿ ಘೋಷಣೆ ಮಾಡಲು ಎಲ್ಲರೂ ಸಹ ಸಹಕರಿಸಿ ಶ್ರಮಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಕೆ.ವೆಂಕಟೇಶ್ ಮನವಿ ಮಾಡಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ, ಕ್ಷೇತ್ರ ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ 2023 ಕಾರ್ಯಕ್ರಮದಡಿ ಶಾಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಮಲೇರಿಯಾ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಂತರಾಜು ಮಾತನಾಡಿ, ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಮಲೇರಿಯಾ, ಡೆಂೆ, ಚಿಕೂನ್ ಗುನ್ಯ, ಮೆದುಳು ಜ್ವರ, ಹಾಗೂ ಆನೆ ಕಾಲು ರೋಗಗಳ ನಿಯಂತ್ರಣ ಸಾಧ್ಯ. ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂೆ ಜ್ವರ, ಚಿಕೂನ್ ಗುನ್ಯಾ, ಮೆದುಳು ಜ್ವರ ಹಾಗೂ ಆನೆಕಾಲು ರೋಗಗಳ ಲಕ್ಷಣಗಳು ಮತ್ತು ಹರಡುವಿಕೆಗೆ ಮುಂಜಾಗ್ರತಾ ಕ್ರಮಗಳು ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಪಿಪಿಟಿ ಮೂಲಕ ವಿವರಿಸಿ ಜನರಿಗೆ ಜಾಗೃತಿ ನೀಡಿದರು.

ಕಾರ್ಯಕ್ರಮದಲ್ಲಿ ಲಾರ್ವ ಹಾಗೂ ಲಾರ್ವಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬುಸಿಯ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ವೇಣುಗೋಪಾಲ್, ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಸೋಮಶೇಖರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಮೇಲ್ವಿಚಾರಕ ಶಿವಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೆಗೌಡ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ತಾಲೂಕು ಮಹಿಳಾ ಆರೋಗ್ಯ ಸಂದರ್ಶಕಿ ಬಿ.ಮಂಗಳಾ ಹಾಗೂ ತಾಲೂಕಿನ ಕಿರಿಯ ,ಹಿರಿಯ ಪ್ರಾಥಮಿಕ ಪ್ರೌಢ ಶಾಲೆ, ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಕರುಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net