ಮಲ್ಲೇನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಕಾವ್ಯ ಮೋಹನ್‌ಕುಮಾರ್

11 ckm 5
ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾವ್ಯ ಮೋಹನ್ ಕುಮಾರ್ ಅವರನ್ನು ಸಹ ಸದಸ್ಯರು ಅಭಿನಂದಿಸಿದರು. ಲಲಿತಾ, ಪುಟ್ಟಮ್ಮ, ಪ್ರೇಮಾ, ಪಲ್ಲವಿ, ಸತೀಶ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕಾವ್ಯ ಮೋಹನ್‌ಕುಮಾರ್ ಬುಧವಾರ ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಸಭಾಂಗಣದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಕಾವ್ಯ ಹೊರತಾಗಿ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಚ್.ಸಿ.ರವೀಶ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಲಿತಾ, ಸದಸ್ಯರಾದ ಪುಟ್ಟಮ್ಮ, ಪ್ರೇಮ, ಪಲ್ಲವಿ, ಸತೀಶ್, ಸಂದೀಪ್, ರವಿ, ತಮ್ಮೇಗೌಡ, ದಿಲೀಪ್, ಸುನೀತಾ ಸ್ವಾಮಿ, ಬಿಜೆಪಿ ಮುಖಂಡರಾದ ಶಿವರಾಜ್, ಪ್ರಕಾಶ್, ಪುನೀತ್, ಪಿಡಿಓ ಸುಶ್ಮಿತಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net