ಮಳವಳ್ಳಿ ಎಲ್ಲೆಡೆ ಸಡಗರ-ಸಂಭ್ರಮ

15 mlv 2
Published on

ಮಳವಳ್ಳಿ: ಪಟ್ಟಣದಲ್ಲಿ ತಾಲೂಕು ಆಡಳಿತ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಸರ್ಕಾರಿ ಕಚೇರಿ, ಶಾಲಾ -ಕಾಲೇಜುಗಳಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ಜರುಗಿದವು.


ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿದರು. ಇದಕ್ಕೂ ಮುನ್ನಾ ತಹಸೀಲ್ದಾರ್ ಲೋಕೇಶ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೊೃೀತ್ಸವದ ಸಂದೇಶ ನೀಡಿದರು. ಪುರಸಭೆ ಪುರಸಭೆ ಸದಸ್ಯರಾದ ರತಾಜಶೇಖರ್, ಶಿವಸ್ವಾಮಿ, ಕಸಾಪ ತಾಲೂಕು ಅಧ್ಯಕ್ಷ ಚೇತನ್ ಕುಮಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಪ್ರದರ್ಶನ ಜರುಗಿತು.


ಬೆಳಕವಾಡಿಯಲ್ಲಿ ಆಚರಣೆ : ವಿವಿಧ ಶಾಲೆಗಳ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು. ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅಧ್ಯಕ್ಷೆ ಕೆ.ಟಿ.ಉಮಾ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಗಿರೀಶ್, ಸದಸ್ಯರು ಹಾಗೂ ಪಿಡಿಒ ಶಿವಸ್ವಾಮಿ ಇದ್ದರು.


ಕಾಗೇಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕ್ಯಾತಮ್ಮನ ಕಟ್ಟೆಯ ಬಳಿ ತಳಗವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಲೋಚನಾ ಧ್ವಜಾರೋಹಣ ನೆರವೇರಿಸಿದರು. ಗ್ರಾಪಂ ಸದಸ್ಯರು ಹಾಗೂಕ ಪಿಡಿಒ ರೇಣುಕ, ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net