ಮಳೆ ನೀರು ಕೊಯ್ಲು ವಿಧಾನ ಅನುಸರಿಸಿ

Innerr Wheel Club Photo-2
Published on

ಬೀದರ್: ನೀರಿನ ಕೊರತೆ ತಪ್ಪಿಸಲು ಮಳೆ ನೀರು ಕೊಯ್ಲು ವಿಧಾನ ಅನುಸರಿಸಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಿನ ಕಾರ್ಯದರ್ಶಿ ಡಾ. ವಿಜಯ ಯು.ಟಿ. ಹೇಳಿದರು.
ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಮಳೆ ನೀರು ಕೊಯ್ಲಿನ ಸಾಂಪ್ರದಾಯಿಕ ಹಾಗೂ ಆಧುನಿಕ ತಂತ್ರಗಳ ಕುರಿತ ತಾಂತ್ರಿಕ ಚರ್ಚೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಳೆ ನೀರು ವ್ಯರ್ಥವಾಗಿ ಹೋಗದಂತೆ, ಭವಿಷ್ಯದ ಬಳಕೆಯ ಉದ್ದೇಶಕ್ಕಾಗಿ ಸಂಗ್ರಹಿಸಲು ಅನೇಕ ಸಾಂಪ್ರದಾಯಿಕ ಹಾಗೂ ಆಧುನಿಕ ವಿಧಾನಗಳು ಇವೆ ಎಂದು ತಿಳಿಸಿದರು.
ಮಳೆ ನೀರು ಕೊಯ್ಲು ವಿಧಾನ ಬಹಳ ಸುಲಭವಾಗಿದೆ. ಹೀಗಾಗಿ ಎಲ್ಲರೂ ಇದನ್ನು ಅಳವಡಿಸಿಕೊಳ್ಳಬಹುದು ಎಂದು ಹೇಳಿದರು.
ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸುರೇಖಾ ಶೇರಿಕಾರ್, ಕಾರ್ಯದರ್ಶಿ ಉಮಾ ಬಸವರಾಜ ಗಾದಗೆ ಉಪಸ್ಥಿತರಿದ್ದರು. ಇನ್ನರ್ ವ್ಹೀಲ್ ಕ್ಲಬ್ ಸದಸ್ಯರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳ ಸುಮಾರು 500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net