ಮಳೆ: ಮನೆ ಗೋಡೆ ಕುಸಿದು ವೃದ್ಧೆ ಸಾವು

WEB SMG
Published on

ಶಿವಮೊಗ್ಗ: ಮಲವಗೊಪ್ಪ ಇಂದಿರಾ ಕಾಲನಿ ಒಂದನೇ ತಿರುವಿನಲ್ಲಿ ಸೋಮವಾರ ರಾತ್ರಿ ಮಳೆಗೆ ಮನೆ ಗೋಡೆ ಕುಸಿದು ಗೌರಮ್ಮ(62) ಎಂಬುವರು ಮೃತಪಟ್ಟಿದ್ದಾರೆ. ಮಳೆಯಿಂದ ಶಿಥಿಲಗೊಂಡಿದ್ದ ಗೋಡೆ ಕುಸಿದು ಗೌರಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಶಾಸಕ ಕೆ.ಬಿ.ಅಶೋಕ ನಾಯ್ಕ, ಮೃತರ ಅಂತಿಮ ದರ್ಶನ ಪಡೆದು ಐದು ಲಕ್ಷ ರೂ. ಪರಿಹಾರದ ಚೆಕ್ ಅನ್ನು ಗೌರಮ್ಮ ಕುಟುಂಬದವರಿಗೆ ಹಸ್ತಾಂತರಿಸಿದರು. ಮನೆ ಕುಸಿತಕ್ಕೆ ಸಂಬಂಧಿಸಿದ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ, ಕಾಂಗ್ರೆಸ್ ಜಿಲ್ಲಾ ವಕ್ತಾರೆ ಜಿ.ಪಲ್ಲವಿ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net