ಮಳೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

DC Photo
Published on

ಯಾದಗಿರಿ: ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆಯ ಸೂಚನೆಯಂತ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂದಿನ 3-4 ದಿನ ಮಂಗಳವಾರದಿಂದ ಅ.15ರವರೆಗೆ ನಿರಂತರವಾಗಿ ಉತ್ತರ ಕನರ್ಾಟಕ ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಮಳೆಯಾಗುವ ಸಂಭವ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆಯವರು ಮುನ್ನೆಚ್ಚರಿಕೆ ತೆಗೆದುಕೊಳ್ಳಲು ನಿರ್ದೇಶನ ನೀಡಿರುತ್ತಾರೆ ಅದರಂತೆ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮನೆಯಿಂದ ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ನೀರು ಹರಿದು ಬರುವ ಸಾಧ್ಯತೆ ಇರುತ್ತದೆ ಆದ್ದರಿಂದ ನದಿ ಹಾಗೂ ಹಳ್ಳದ ದಡದ ಹತ್ತಿರ ಜನರು ಹಾಗೂ ಜಾನುವಾರುಗಳು ಹೋಗದಂತೆ ಎಚ್ಚರವಹಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಕಂದಾಯ, ಪೊಲೀಸ್, ಸ್ಥಳೀಯ ಸಂಸ್ಥೆ ಇಲಾಖೆಗಳ ಹಾಗೂ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಗ್ರಾಪಂ ವಿಪತ್ತು ನಿರ್ವಹಣಾ ಸಮಿತಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಪ್ರವಾಹ, ಭಾರಿ ಗಾಳಿ-ಮಳೆ ಬಗ್ಗೆ ಮುನ್ನೆಚ್ಚರಿಕೆ ಕುರಿತು ಗ್ರಾಮಗಳಲ್ಲಿ ಡಂಗೂರ ಸಾರುವಂತೆ ಅವರು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕೂವಿಡ್-19, ಪ್ರವಾಹ, ಅತೀವೃಷ್ಠಿ, ವಿಕೋಪದ ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253771 ಸಂಖ್ಯೆಗೆ ಕರೆ ಮಾಡುವಂತೆ ಸಾರ್ವಜನಿಕರಲ್ಲಿ ಅವರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net