ಮಳೆ ಹಾನಿ ಕುರಿತು ಶೀಘ್ರ ವರದಿ ಸಲ್ಲಿಸಿ

ydg05
Published on

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಯಾಗಿರುವ ಬೆಳೆ ಮತ್ತು ಮನೆಯನ್ನು ಪರಿಶೀಲಿಸಿ ಶೀಘ್ರ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಜಿ¯್ಲÁಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಪ್ರಕೃತಿ ವಿಕೋಪದಡಿ ಬೆಳೆ, ರಸ್ತೆ, ಮೂಲಸೌಕರ್ಯ ಹಾನಿಯಾದ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅತಿವೃಷ್ಠಿಯಿಂದ ಬೆಳೆ ಮತ್ತು ಮನೆ ಹಾನಿ ಕುರಿತಂತೆ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವುದರ ಜತೆಗೆ ಈ ಹಿಂದೆ ಮನೆ ಹಾನಿಗೆ ಸಂಬAಧಿಸಿದAತೆ ಬಾಕಿ ಉಳಿದಿರುವ ಪರಿಹಾರ ಆದ್ಯತೆ ಮೇರೆಗೆ ವಿತರಿಸುವಂತೆ ತಾಕೀತು ಮಾಡಿದರು.

ಜಿ¯್ಲೆಯ ವಿವಿಧ ತಾಲೂಕಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು. ಅದರಂತೆ ಮನೆ ಹಾನಿ, ರಸ್ತೆ ಮೂಲಸೌಕರ್ಯಗಳ ಹಾನಿ ಕುರಿತು ಶೀಘ್ರ ಪರಿಶೀಲಿಸಬೇಕು. ಜಿ¯್ಲÉಯ ಸಿರವಾಳದಿಂದ ಅಣಬಿವರೆಗೆ ಹಾಗೂ ಶಹಾಪುರದಿಂದ ಶಿರವಾಳವರೆಗೆ ಹಾಗೂ ಇಬ್ರಾಹಿಂಪುರದಿAದ ಚಟ್ನಳ್ಳಿವರೆಗೆ ರಸ್ತೆ ಹಾನಿಯಾಗಿದೆ. ಈ ರಸ್ತೆಗಳ ಮಧ್ಯೆ ಭಾರತಮಾಲಾ, ರೈಲ್ವೆ ಕಾಮಗಾರಿ ನಡೆಯುತ್ತಿದ್ದು, ಈ ಕುರಿತಂತೆ ಜಂಟಿ ಸಹಯೋಗದೊಂದಿಗೆ ರಸ್ತೆ ದುರಸ್ತಿ ಕೈಗೊಳ್ಳುವ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಖುz್ದÁಗಿ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಶಾಸಕ ಚನ್ನಾರಡ್ಡಿ ಪಾಟೀಲï, ಜಿ¯್ಲÁಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಡಿಸಿ ಶರಣಬಸಪ್ಪ ಕೊಟಪ್ಪಗೋಳ, ಎಸಿ ಡಾ.ಹಂಪಣ್ಣ ಸಜ್ಜನ್, ಕೃಷಿ ಅಧಿಕಾರಿ ರಿತೇಂದ್ರನಾಥ ಸೂಗೂರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಈ ವೇಳೆ ಜಿ¯್ಲÉಯಲ್ಲಿ ಆಗಿರುವ ಬಿತ್ತನೆ, ಬೆಳೆ ಹಾನಿ, ಭೀಮಾ, ಕೃಷ್ಣ ನದಿ ವ್ಯಾಪ್ತಿಯಲ್ಲಿ ಬೆಳೆ ಪರಿಸ್ಥಿತಿ, ರಸಗೊಬ್ಬರದ ಅವಶ್ಯಕತೆ, ಬೆಳೆವಿಮೆ ಪರಿಹಾರ ವಿತರಣೆ, ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿ ಆದ ಬೆಳೆ ಹಾನಿ, ಫ್ರೂಟ್ಸ್ ತಂತ್ರಾAಶದಲ್ಲಿ ರೈತರ ನೋಂದಣಿ ಕುರಿತಂತೆ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net