

ಸೋಮವಾರಪೇಟೆ: ಮಂಗಳವಾರ ಸಂಜೆ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜಲಾವೃತಗೊಂಡ ಸ್ಥಳಗಳಿಗೆ ಶಾಸಕ ಡಾ.ಮಂತರ್‌ಗೌಡ ಅವರ ನಿರ್ದೇಶನದಂತೆ ಬುಧವಾರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯಿತಿ ಎಇಇ ನಾರಾಯಣಮೂರ್ತಿ, ಲೋಕೋಪಯೋಗಿ ಇಲಾಖೆ ಎಇಇ ಕುಮಾರ್ ಭೇಟಿ ನೀಡಿ, ನೀರು ಸರಾಗವಾಗಿ ಹರಿಯಲು ಆಗಲ ಚರಂಡಿ ಹಾಗೂ ಮೋರಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಚೇತನ್, ಪಿಡಿಒ ರವಿ, ಕಾಂಗ್ರೆಸ್ ಪ್ರಮುಖರಾದ ಚೇತನ್, ಸೋಮೇಶ್, ಮಧುಸೂಧನ್ ಇದ್ದರು.