ಮಳೆಗೆ ನೆಲಕ್ಕುರುಳಿದ ಮರಗಳು

3 Dwd 9
Published on

ಧಾರವಾಡ: ತಾಲೂಕಿನ ವಿವಿಧೆಡೆ ಭಾನುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ನಿಗದಿ ಗ್ರಾಮದಲ್ಲಿ 5ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಗ್ರಾಮದ ಶಾಲೆ ಮತ್ತು ಮನೆಗಳ ಮೇಲೆ ಮರಗಳು ಬಿದ್ದಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ವಿಪರೀತ ಗಾಳಿಯೊಂದಿಗೆ ಸುರಿದ ಮಳೆಯಿಂದ ಮರಗಳು ನೆಲಕಚ್ಚಿವೆ. ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾದಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net