ಮಳೆಗೆ ಮನೆ ಕುಸಿತ

25blrp6
ಬೇಲೂರು ತಾಲೂಕಿನ ಪಡವಳಲು ಗ್ರಾಮದ ಮಹೇಶ್ ಅವರ ಮನೆ ಕುಸಿದಿದೆ
Published on

ಬೇಲೂರು: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಾಲೂಕಿನ ಪಡವಳಲು ಗ್ರಾಮದ ಸೋಮವಾರ ಮನೆ ಕುಸಿದಿದೆ.

ಗ್ರಾಮದ ಮಹೇಶ್ ಅವರ ಮನೆ ಕುಸಿದಿದೆ. ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶಿಥಿಲಾವಸ್ಥೆ ತಲುಪಿದ್ದ ಮನೆಯನ್ನು ಖಾಲಿ ಮಾಡಿಕೊಂಡು ಪತ್ನಿ ಹಾಗೂ ಇಬ್ಬರೂ ಮಕ್ಕಳೊಂದಿಗೆ ಮಹೇಶ್ ಬೇರೆ ಮನೆಯಲ್ಲಿ ವಾಸವಿದ್ದರು. ಹಳೆಯದಾಗಿದ್ದ ಮನೆಯ ಗೋಡೆಗಳು ನಿರಂತರ ಮಳೆಯಿಂದ ನೆನೆದು ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಮನೆಯಲ್ಲಿದ್ದ ಪೀಠೋಪಕರಣ, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿವೆ. ಘಟನೆ ಸ್ಥಳಕ್ಕೆ ತಹಸೀಲ್ದಾರ್ ಎಂ.ಮಮತಾ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net