ಮಳೆಗೆ ಮನೆ ಗೋಡೆ ಕುಸಿತ

Oplus_16908288
Oplus_16908288
Published on

ನಂಜನಗೂಡು: ತಾಲೂಕಿನ ಹೆಡತಲೆ ಗ್ರಾಮದಲ್ಲಿ ಇತ್ತೀಚೆಗೆ ಸುಳಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ಪರಿಶಿಷ್ಟ ಪಂಗಡದ ನಾಯಕ ಸಮುದಾಯಕ್ಕೆ ಸೇರಿದ ದುಂಡಮ್ಮ ಎಂಬುವವರು ಕಳೆದ 35 ವರ್ಷಗಳಿಂದಲೂ ತೆಂಗಿನಗರಿಯ ಗುಡಿಸಲು ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಮರಿಚಿಕೆಯಾಗಿವೆ. ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಇವರಿಗೆ ತಲುಪಿಲ್ಲ. ವಿದ್ಯುತ್ ಇಲ್ಲದೆ ಮೇಣದ ಬತ್ತಿಯಲ್ಲೇ ಕಾಲ ಕಳೆಯುತ್ತಿದ್ದಾರೆ, ಮಳೆ ಬಂದರೆ ಸೋರುತ್ತದೆ. ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದಿದ್ದು ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇವರಿಗೆ ಮಲಗಲು ಜಾಗವಿಲ್ಲದೆ ಇದೇ ಮನೆಯಲ್ಲಿ ವಾಸ ಮಾಡುತ್ತಿರುವುದು ಕಂಡುಬಂದಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ವಾಸಿಸಲು ಮನೆ ನಿರ್ಮಿಸಿ ಕೊಡಬೇಕೆಂದು ಮನೆಯ ಯಜಮಾನಿ ದುಂಡಮ್ಮ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net