

ತ್ಯಾಗರ್ತಿ: ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗದ್ದೆಗಳಲ್ಲಿ ನೀರು ತುಂಬಿ ರೈತರಿಗೆ ನಷ್ಟ ಸಂಭವಿಸಿದೆ. ಬಸವನಬ್ಯಾಣ, ಗುತ್ತನಹಳ್ಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆ ನೀರು ನುಗ್ಗಿರುವ ಕಾರಣ ಭತ್ತ, ಮೆಕ್ಕೆಜೋಳ, ಶುಂಠಿ, ಅಡಕೆ ತೋಟಗಳಿಗೆ ಹಾನಿಯಾಗಿದೆ. ತಾಪಂ ಮಾಜಿ ಸದಸ್ಯ ಸೋಮಶೇಖರ ಲಾವಿಗ್ಗೆರೆ ಶುಕ್ರವಾರ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಕಾರಿಗಳಿಗೆ ಮಾಹಿತಿ ನೀಡಿದರು.