ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ನ್ಯಾಯಾಧೀಶೆ ಭೇಟಿ: ಪರಿಶೀಲನೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ನ್ಯಾಯಾಧೀಶೆ ಭೇಟಿ: ಪರಿಶೀಲನೆ
Published on

ಹಾಸನ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಅವರು ನಗರದಲ್ಲಿ ಅತೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.
ಪೆನ್ಶನ್ ಮೊಹಲ್ಲಾ, ತೇಜೂರಿನಲ್ಲಿ, ಕೋರಹಳ್ಳಿಯಲ್ಲಿ, ಅರೆಕಲ್ಲುಹೊಸಳ್ಳಿಯಲ್ಲಿ , ಎಚ್ ಹರಳಹಳ್ಳಿಯಲ್ಲಿ , ಯರೆಹಳ್ಳಿಯಲ್ಲಿ , ರಾಗಿಮುದ್ದನಹಳ್ಳಿಯಲ್ಲಿ , ಎ ಕಾಟಿಹಳ್ಳಿಯಲ್ಲಿ , ಒಟ್ಟು ಹಾಸನ ತಾಲೂಕು ವ್ಯಾಪ್ತಿಯಲ್ಲಿ 12 ಮನೆಗಳು ಹಾನಿಗೊಳಗಾಗಿದ್ದು ಶೀಘ್ರವಾಗಿ ಸರ್ಕಾರಕ್ಕೆ ಈ ಬಗ್ಗೆ ವರದಿಯನ್ನು ಸಲ್ಲಿಸಿ ಪರಿಹಾರದ ಚೆಕ್ ವಿತರಿಸುವಂತೆ ಸೂಚಿಸಿದರು.
ಕಂದಾಯ ಇಲಾಖೆಯಿಂದ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಪರಿಹಾರದ ಚೆಕ್ ವಿತರಿಸುವಂತೆ ನಿರ್ದೇಶನ ನೀಡಿದ ಅವರು,
ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಬೆಳೆ ಹಾನಿಯಾಗಿದೆ. ಇದರಿಂದ ಜಿಲ್ಲಾಡಳಿತ ಶೀಘ್ರವಾಗಿ ಪರಿಹಾರ ನೀಡಬೇಕು. ಸರ್ಕಾರದ ಸವಲತ್ತನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಯು.ಎಂ. ಮೋಹನ್ ಕುಮಾರ್, ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net