ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲು ಸೂಚನೆ

ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲು ಸೂಚನೆ
Published on

ಹಾಸನ: ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಆಯುಕ್ತರಾದ ಡಾ ಅಜಯ್ ನಾಗಭೂಷಣ್ ಅವರು ಸೂಚಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಸಂಜೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅತಿವೃಷ್ಟಿ ಹಾನಿ ನಿಯಂತ್ರಣ ಹಾಗೂ ಪರಿಹಾರಕ್ಕೆ ಎಲ್ಲಾ ರೀತಿಯ ಕ್ರಮವಹಿಸಿ. ಬೀದಿ ಬದಿ ವ್ಯಾಪಾರಿಗಳಿಗೆ ಸ್ವ ನಿಧಿ ಯೋಜನೆ ಅನುಷ್ಠಾನ ಅನುಕೂಲಗಳನ್ನು ಕಲ್ಪಿಸಿ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಅಪರ ಪೋಲಿಸ್ ವರಿಷ್ಠಾಧಿಕಾರಿ ತಮ್ಮಯ್ಯ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net