

ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಹೊಸಗಾವಿಯ ಇತಿಹಾಸ ಪ್ರಸಿದ್ಧ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿಯ ಕಾರ್ತಿಕ ಜಾತ್ರೆ ಶನಿವಾರ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.
ದೇಗುಲದ ಆವರರಣದಲ್ಲಿ ರಾತ್ರಿ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಹೊಸಗಾವಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕಾರ ಮಾಡಿದರು.
ಜಾತ್ರೆ ಂಗವಾಗಿ ದೇವಾಲಯಲ್ಲಿ ಮಂಗಳಾರತಿ, ವಿಶೇಷ ಪೂಜೆ, ಅಭಿಷೇಕ, ಹಾಲರವಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.