ಮಹನೀಯರ ಜಯಂತಿ ಸರಳ ಆಚರಣೆ

CTD 30 ADC B.T.KUMARASWAMI --02
Published on

ಚಿತ್ರದುರ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶ್ರೀ ರೇಣುಕಾಚಾರ್ಯ, ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಹಾಗೂ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಯಂತಿಗಳ ಆಚರಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ನೀತಿ ಸಂಹಿತೆ ಕಾರಣ ಮಹನೀಯರ ಭಾವಚಿತ್ರ ಮೆರವಣಿಗೆಗೆ ಅಕವಾಶ ಇಲ್ಲ. ಡಿಸಿ ಅಥವಾ ನಗರಸಭೆ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಿಸಲಾಗುವುದು ಎಂದರು.

ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅತ್ಯಂತ ಸರಳವಾಗಿ ಜಯಂತಿ ಆಚರಿಸಲಾಗುವುದು. ವೀರಶೈವ ಸಮಾಜದ ಮುಖಂಡರ ಮನವಿ ಮೇರೆಗೆ ಮಾ. 23ರ ಬದಲು 22ರಂದೇ ಶ್ರೀ ರೇಣುಕಾಚಾರ್ಯ, 25ಕ್ಕೆ ಶ್ರೀ ಕೈವಾರ ತಾತಯ್ಯ, 28ಕ್ಕೆ ಶ್ರೀ ಅಗ್ನಿಬನ್ನಿರಾಯ ಜಯಂತಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್, ಸಿಪಿಐ ಗುಡ್ಡಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿ ಸಿದ್ದೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net