ಮಹಿಳೆಯರಿಗೆ, ರೈತರಿಗೆ ಕಾಂಗ್ರೆಸ್ ಕೊಡುಗೆ ಅಪಾರ

lkp meeting
ಲೋಕಾಪುರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿದರು. ಧರೆಪ್ಪ ಸಾಂಗ್ಲಿಕರ, ಅಶೋಕ ಕಿವಡಿ, ಶಿವಾನಂದ ಉದಪುಡಿ, ಸದುಗೌಡ ಪಾಟೀಲ, ಲಕ್ಷ್ಮಣ ಮಾಲಗಿ, ಗುರುರಾಜ ಉದಪುಡಿ ಇತರರಿದ್ದರು.
Published on

ಲೋಕಾಪುರ: ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಅವರ ಭಾಷಣದಿಂದ ದೇಶ ಅಭಿವೃದ್ಧಿ ಆಗಲ್ಲ. ಅಧಿಕಾರಕ್ಕೆ ಬಂದರೆ ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ ಮೋದಿ ಯುವಕರಿಗೆ ಉದ್ಯೋಗ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರದ ವೈಫಲ್ಯ, ನಮ್ಮ ಸಾಧನೆಯಿಂದ ಕಾಂಗ್ರೆಸ್ ಪಕ್ಷದ ಗೆಲುವು ಖಚಿತ. ರಾಜ್ಯದಲ್ಲಿ ಪ್ರಧಾನಿಯವರ ಹವಾ ಏನೂ ಇಲ್ಲಾ, 20 ವರ್ಷ ನಮ್ಮ ಸಂಸದರು ಎಲ್ಲಿ ಹೋಗಿದ್ದರು ಎಂಬುದೇ ಈ ಕ್ಷೇತ್ರದ ಜನರಿಗೆ ತಿಳಿದಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರಿಗೆ ಜಯಮಾಲೆ ಹಾಕಿದರೆ ಕೇವಲ ಐದು ವರ್ಷದಲ್ಲಿ ಕುಡಚಿ- ಬಾಗಲಕೋಟೆ ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮೇ 7 ರಂದು ನಡೆಯಲಿರುವ ಚುನಾವಣೆಯಲ್ಲಿ ಸಂಯುಕ್ತ ಪಾಟೀಲ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಕೋ ಆರ್ಡಿನೇಟರ್ ಸದುಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷದ ವರಿಷ್ಠರು ಬಾಗಲಕೋಟೆ ಲೋಕಸಭೆ ಕ್ಷೇತ್ರದ ಟಿಕೆಟ್‌ನ್ನು ಸಂಯುಕ್ತ ಪಾಟೀಲ ಅವರಿಗೆ ನೀಡಿದ್ದು ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ವಕೀಲ ಉದಯಸಿಂಗ್ ಪಡತಾರೆ, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿದರು.

ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧರೆಪ್ಪ ಸಾಂಗ್ಲೀಕರ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಬಿಡಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ, ಗುರುರಾಜ ಉದಪುಡಿ, ಕೆಎಂಎ್ ನಿರ್ದೇಶಕ ಲಕ್ಷ್ಮಣ ಮಾಲಗಿ, ರಾಜುಗೌಡ ನ್ಯಾಮಗೌಡ, ಡಾ. ಬಸವರಾಜ ಹಿರೇಮಠ, ಹೊಳಬಸು ದಂಡಿನ, ರಘು ಮೊಕಾಸಿ, ಮುದಕಪ್ಪ ಅಂಬಿಗೇರ, ಕೃಷ್ಣಾ ಹೂಗಾರ, ಮಹಾಂತೇಶ ಕಡಕೋಳಮಠ, ಕೃಷ್ಣಾ ಜಟ್ಟೆನ್ನವರ, ಮಹೇಶ ಪೂಜಾರ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net